ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಆಗ್ರಹಿಸಿ,ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ .
ದಾವಣಗೆರೆ:-ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರವು ಅಯಾ ರಾಜ್ಯ ಸರಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತೀರ್ಪು ನೀಡಿರುವುದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಒಳ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು .
ಈ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು,ಉಪಾಧ್ಯಕ್ಷರು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲ ತಾಲ್ಲೂಕು ಘಟಕದ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಉಪಸ್ಥಿತರಿದ್ದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ವರದಿ
ಪ್ರಕಾಶ್ ಮಂದಾರ