ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ….

Share The News

ಬೆಂಗಳೂರು: ದಾಖಲೆಯ ಏರಿಕೆ ಕಂಡಿದ್ದ ಚಿನ್ನದ ದರ ಮತ್ತೆ ನಿಧಾನವಾಗಿ ಇಳಿಯಲಾರಂಭಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಮತ್ತು ಭಾರತೀಯ ಮಾರುಕಟ್ಟೆ ಎರಡರಲ್ಲೂ ಚಿನ್ನ ಇಳಿಕೆ ದಾಖಲಿಸಿದೆ.

ಹೌದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 49,440 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಇಳಿಕೆಯಾಗಿದ್ದು, 50,440 ರೂಪಾಯಿ ಆಗಿದೆ.

ಚಿನ್ನದ ಬೆಲೆ ಏರಿಕೆಯಾಗಿದ್ದರೂ ಬೆಳ್ಳಿ ದರ ಮಾತ್ರ ಇಳಿಕೆಯಾಗಿದೆ. ಬೆಳ್ಳಿ ದರದಲ್ಲೂ 80 ರೂಪಾಯಿ ಇಳಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ 67,900 ರೂ ಆಗಿದೆ.

ಕೊರೋನಾತಂಕ ನಡುವೆ ಉದ್ಯಮಗಳು ನೆಲಕಚ್ಚಿದ್ದು, ಹಣ ಹೂಡಿಕೆ ಮಾಡಲು ಅನೇಕ ಮಂದಿಗೆ ಸಿಕ್ಕ ಒಂದೇ ದಾರಿ ಚಿನ್ನವಾಗಿದೆ. ಹೀಗಾಗಿ ಚಿನ್ನದ ಬೇಡಿಕೆ ಕಡಿಮ ಇದ್ದರೂ ಹೂಡಿಕೆ ಹೆಚ್ಚಾಗಿ ಬೆಲೆಯೂ ಬಾರ ಏರಿಕೆ ಕಂಡಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ


Share The News

Leave a Reply

Your email address will not be published. Required fields are marked *

error: Content is protected !!