ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.
ಹಲವಾರು ಶಿಕ್ಷಕರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ
ದಿನಾಂಕ : 12-10-2020 ರಿಂದ 30-10-2020 ರವರೆಗೆ ಮೂರು ವಾರಗಳ ಕಾಲ ರಾಜ್ಯದ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.