Big Breaking : ರಾಜ್ಯದಲ್ಲಿ ‘ನೈಟ್ ಕರ್ಫ್ಯೂ’ ಆದೇಶ ವಾಪಸ್ – ಸಿಎಂ ಬಿಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ

Share The News

ಬೆಳಗಾವಿ : ಇಂದು ರಾತ್ರಿಯಿಂದ ಕೊರೋನಾ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಇಂತಹ ನೈಟ್ ಕರ್ಪ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆದಿದೆ.

ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇಂದು ರಾತ್ರಿಯಿಂದ ಜಾರಿಗೆ ಬರಲಿದ್ದಂತ ನೈಟ್ ಕರ್ಪ್ಯೂ ಆದೇಶವನ್ನು ರಾಜ್ಯ ಸರ್ಕಾರ ವಾಪಾಸ್ ಪಡೆದಿದ್ದಾರೆ.


Share The News

Leave a Reply

Your email address will not be published. Required fields are marked *

error: Content is protected !!