*ತರಕಾರಿ ತರೋದಿದ್ರೆ ನಡ್ಕೊಂಡೆ ಹೋಗಬೇಕು : ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಮಾಹಿತಿ*

Share The News

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಬೆಳಿಗ್ಗೆ ಸುಮಾರು 2 ಗಂಟೆ ಕಾಲ ನಮ್ಮ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳ ಜೊತೆಗೆ, ಕೋವಿಡ್ ನಿಯಂತ್ರಣ ಬಾರದ ಈ ಸಂದರ್ಭದಲ್ಲಿ ಯಾವ ರೀತಿಯ ತೀರ್ಮಾನ ಕೈಗೊಳ್ಳಬೇಕು ಎನ್ನುವ ಬಗ್ಗೆ ಚರ್ಚಿಸಲಾಯಿತು. ಈಗ ಅಧಿಕಾರಿಗಳ ಜೊತೆಗೆ ತೀರ್ಮಾನಿಸಿಲಾಗಿದೆ ಎಂದರು.

ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ.

ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿರ್ಬಂಧಿಸಲಾಗಿದೆ ಎಂದರು.

ಆಹಾರ, ಹಾಲು, ತರಕಾರಿ ಮಾರಾಟಕ್ಕೆ ಅನುಕೂಲುವಾಗುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಹಾಲಿನ ಅಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ. ತಳ್ಳೋ ಗಾಡಿಯಲ್ಲಿ ಕೂಡ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗೆ ಹೋಗದೋದಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತು ಕೊಂಡೊಯ್ಯೋದಕ್ಕೆ ಅವಕಾಶ ನೀಡಲಾಗಿದೆ ಎಂದರು. ನಿಗಧಿತ ಕಟ್ಟಡದೊಳಗೆ ಜನರನ್ನು ಬಳಸಿಕೊಂಡು ಕೆಲಸ ಮಾಡೋದಕ್ಕೆ ಅವಕಾಶ. ವಿವಾಹದಲ್ಲಿ 50 ಜನರಿಗೆ ಮಾತ್ರ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿದೆ. ಹೆಚ್ಚು ಜನರು ಭಾಗವಹಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇನ್ನೂ, ಲಾಕ್ ಡೌನ್ ವೇಳೆ ಏನಿರುತ್ತೆ ಏನಿರಲ್ಲ ಎಂಬುದನ್ನು ನೋಡುವುದಾದರೆ

ಏನಿರಲ್ಲ

1) ಥಿಯೇಟರ್, ಶಾಪಿಂಗ್ ಮಾಲ್, ಜಿಮ್ ಬಂದ್

2) ಸ್ವಿಮ್ಮಿಂಗ್ ಪೂಲ್, ಬಾರ್ , ಕ್ಲಬ್, ಪಾರ್ಕ್ ಬಂದ್

3) ಥಿಯೇಟರ್ ಸೇರಿದಂತೆ ಎಲ್ಲಾ ಮನರಂಜನಾ ಕಾರ್ಯಕ್ರಮಗಳಿಗೆ ಸಂಪೂರ್ಣ ನಿಷೇಧ

4) ಅಂತರ್ ಜಿಲ್ಲಾ ಸಂಚಾರ ಸಂಪೂರ್ಣ ಬಂದ್ ಆಗಿರಲಿದೆ

5)ಅಂತರ್ ಜಿಲ್ಲಾ ವಾಹನ ಸಂಚಾರ ಕೂಡ ಬಂದ್

6) ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ

7) ಮೆಟ್ರೋ,ರೈಲು ಸಂಚಾರ ಬಂದ್

8) ಹೋಟೆಲ್, ರೆಸ್ಟೋರೆಂಟ್, ಲಿಕ್ಕರ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ

9) ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ನಿಷೇಧ

10) ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚತಕ್ಕದ್ದು.

ಏನಿರುತ್ತೆ

1) ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

2) ಆಟೋ, ಟ್ಯಾಕ್ಸಿ ಕ್ಯಾಬ್ ಸಂಚಾರಕ್ಕೆ ಅವಕಾಶ

3) ನಡೆದುಕೊಂಡು ಹೋಗಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದು

4) ತುತ್ತು ಸನ್ನಿವೇಶದಲ್ಲಿ ಮಾತ್ರ ಅಂತರ್ ರಾಜ್ಯ, ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ

5) ಕಟ್ಟಡ ಕಾಮಗಾರಿಗೆ ಅವಕಾಶ

6) ವಿವಾಹ ಕಾರ್ಯಕ್ರಮದಲ್ಲಿ 50 ಜನರಿಗೆ ಮಾತ್ರ ಅವಕಾಶ

8) ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಅವಕಾಶ

9) ಪಾರ್ಸಲ್ ತೆಗೆದುಕೊಂಡು ಹೋಗೋದಕ್ಕೆ ಅವಕಾಶ. ಆದ್ರೇ ವಾಹನದಲ್ಲಿ ತೆರಳುವಂತಿಲ್ಲ. ಕಾಲ್ನಡಿಗೆಯಲ್ಲಿ ತೆರಳಬೇಕು

10) ಇ-ಕಾಮರ್ಸ್ ಚಟುವಟಿಕೆಗೆ ಅವಕಾಶ

11) ಅನುಮತಿ ನೀಡಿದ ಕೈಗಾರಿಕೆಗಳು ತೆರಯಲು ಅವಕಾಶ

12) ವೈದ್ಯಕೀಯ ಉತ್ಪಾದನಾ ಕೈಗಾರಿಕೆ ತೆರೆಯಲು ಅವಕಾಶ

13) ಅಗತ್ಯ ವಸ್ತು ಉತ್ಪಾದನಾ ಕೈಗಾರಿಕೆಗಳಿಗೆ ಅನುಮತಿ


Share The News

Leave a Reply

Your email address will not be published. Required fields are marked *

error: Content is protected !!