ಬೆಳಗಾವಿಯಲ್ಲಿ ಶನಿವಾರದಿಂದ ಸೋಮವಾರದವರೆಗೆ ಸಂಪೂರ್ಣವಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೋವಿಡ್ ಸಂಖ್ಯೆ ಹೆಚ್ಚುತ್ತಾ ಸಾಗಿವೆ. ಈ ಹಿನ್ನಲೆಯಲ್ಲಿ ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವಿವಿಧ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ್ದಾರೆ. ಆ ಬಳಿಕ ಸಂಪೂರ್ಣ ಲಾಕ್ ಡೌನ್ ಹೇರುವ ಸಂಪೂರ್ಣ ಅಧಿಕಾರವನ್ನು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಬಿಟ್ಟುಕೊಟ್ಟಿದ್ದರು.
ಪ್ರಧಾನಿ ಅಧಿಕಾರ ಕೊಡುತ್ತಿದ್ದಂತೆ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಜಿಲ್ಲೆಗಳಿಗೆ ಲಾಕ್ ಡೌನ್ ಹೇರುವ ಘೋಷಣೆ ಮಾಡಿದ್ದಾರೆ.ಅದರ ಬೆನ್ನಲ್ಲೇ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ತಮ್ಮ ಜಿಲ್ಲೆಯನ್ನು ಸಹ ಲಾಕ್ ಡೌನ್ ಗೆ ಒಳಪಡಿಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಶನಿವಾರ (ಮೇ.22) ಬೆಳಿಗ್ಗೆ 06.00 ಗಂಟೆಯಿಂದ (ಮೇ.24) ಸೋಮವಾರ ಬೆಳಿಗ್ಗೆ 06.00 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.