ನಾಳೆ ಸಂಜೆ ಪುನೀತ್ ಅಂತ್ಯಕ್ರಿಯೆ : ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ

Share The News

ಬೆಂಗಳೂರು : ಇಹಲೋಕ ತ್ಯಜಿಸಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ (ಶನಿವಾರ) ಸಂಜೆಯೊಳಗೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.
ಪುನೀತ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಅವರ ಸದಾಶಿವ ನಗರ ನಿವಾಸಕ್ಕೆ ತರಲಾಗಿದೆ. ಕುಟುಂಬ ಸದಸ್ಯರೊಂದಿಗೆ ಕನ್ನಡ ಚಿತ್ರ ರಂಗದ ಹಲವಾರು ಗಣ್ಯರು ಮನೆಯಲ್ಲಿದ್ದಾರೆ. ಭಾರಿ ಸಂಖ್ಯೆಯ ಪೊಲೀಸರನ್ನು ನಿವಾಸದ ಸುತ್ತ ನಿಯೋಜಿಸಲಾಗಿದೆ.
ಇಂದು ಸಂಜೆ 5 ಗಂಟೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪುನೀತ್ ಅವರ ನಿವಾಸದ ಬಳಿ ಯಾರೂ ತೆರಳದಂತೆ ಸರಕಾರ ಮನವಿ ಮಾಡಿದ್ದು, ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗ ಬೇಡಿ. ಶಾಂತ ರೀತಿಯಲ್ಲಿ ಇರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಎಲ್ಲೆಡೆ ವ್ಯಾಪಕ ಭದ್ರತೆ ಏರ್ಪಡಿಸಲಾಗಿದೆ.


Share The News

Leave a Reply

Your email address will not be published. Required fields are marked *

error: Content is protected !!