ವರದಿ:ಕೊಪ್ಪಳ
ಮಾಹಿತಿ ಕೇಳಿದ ಸಾಮಾಜಿಕ ಕಾರ್ಯಕರ್ತರಾದ ಶರಣಪ್ಪ ಗೊಡಚಿಹಳ್ಳಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತನಾದ ಶರಣಪ್ಪ ಗೊಡಚಿಹಳ್ಳಿ ಕೋಪ್ಪಳ ಜಿಲ್ಲೆಯ ಕೋಪ್ಪಳ ತಾಲೂಕಿನ ಹಲವಾಗಲಿ ಗ್ರಾಮದ ನಿವಾಸಿಯಾಗಿದ್ದು ಈತನು ದಿನಾಂಕ 18.07.2022 ರಂದು ಮಾಹಿತಿ ಹಕ್ಕು ಅಧಿನಿಯಮ 2005 ರಡಿಯಲ್ಲಿ ಗೌರಿಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಒದಗಿಸಲು ಅರ್ಜಿ ಸಲ್ಲಿಸಿದ್ದರು. ಸದರಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೌರಿಪುರದ ಮುಖ್ಯೋಪಾಧ್ಯಾಯರು ಪೂರ್ಣ ಮಾಹಿತಿ ಒದಗಿಸಿದ ಹಿನ್ನೆಲೆಯಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಮುಂದುವರೆದು ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇಲ್ಮನವಿ ನಡೆಸಲು ದಿನಾಂಕ:20.10.2022 ರಂದು ಬೆಳಿಗ್ಗೆ 11:00 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಗಂಗಾವತಿ ಇಲ್ಲಿಗೆ ಹಾಜರಾಗಲು ನನಗೆ ಪತ್ರ ಬರೆದಿದ್ದರು.
ಸದರಿ ಪತ್ರದ ಅನ್ವಯ ದಿನಾಂಕ 20.10.2022 ರಂದು ಗಂಗಾವತಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿಗೆ ತೆರಳಲು ಅಣಿಯಾಗಿದ್ದ ಸಂದರ್ಭದಲ್ಲಿ ಬೆಳಿಗ್ಗೆ 9:00 ಗಂಟೆ ಸುಮಾರಿಗೆ ಅನಾಮದೇಯ ವ್ಯಕ್ತಿಯಿಂದ ಶರಣಪ್ಪ ಗೊಡಚಿಹಳ್ಳಿ ಮೊಬೈಲ್ ಸಂಖ್ಯೆಗೆ ದೂರವಾಣಿ ಕರೆ ಮಾಡಿ ಶರಣಪ್ಪ ಅವರಿಗೆ ಜೀವ ಬೆದರಿಕೆ ಹಾಕಿರುತ್ತಾರೆ ಮಾಹಿತಿ ಹಕ್ಕಿನಡಿ ಸಲ್ಲಿಸಿದ ಅರ್ಜಿಯ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಬಾ ನಾನು ನಿನಗೋಸ್ಕರ ಇಲ್ಲೇ ಕಾಯುತ್ತಿರುತ್ತೇನೆ ಎಂದು ಧಮ್ಕಿ ಹಾಕಿರುತ್ತಾರೆ ಹೀಗೆ ಹಲವು ಬಾರಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಹಾಗೂ ಅಧಿಕಾರಿಗಳಿಗೆ ಮಾತ್ರ ಅರ್ಜಿ ಸಲ್ಲಿಸಿದ ಬಗ್ಗೆ ಮಾಹಿತಿ ಇರುತ್ತದೆ ಆದರೆ ಸದರಿ ಪ್ರಕರಣದಲ್ಲಿ ಮೂರನೇ ವ್ಯಕ್ತಿಯಿಂದ ಧಮ್ಕಿ ಕರೆಗಳು ಬರುತ್ತಿದ್ದು ಇದು ನೇರವಾಗಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹೊಣೆಗಾರರಾಗಿದ್ದು
ಕೂಡಲೇ ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿ ತಪ್ಪಿತಸ್ಥ ಅಧಿಕಾರಿ ಹಾಗೂ ಧಮ್ಕಿ ಹಾಕಿದ ವ್ಯಕ್ತಿಗೆ ಕಾನೂನಿನಡಿ ಕಠಿಣ ಕ್ರಮ ಜರುಗಿಸಬೇಕೆಂದು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿನಂತಿಸಿಕೊಂಡಿದ್ದಾರೆ.
ವರದಿ:ಬಸವರಾಜ ಬಡಿಗೇರ