ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ಸಂಘಟನೆ ವತಿಯಿಂದ ಪ್ರಾದೇಶಿಕ ಆಯುಕ್ತರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ದಿನಾಂಕ 21-09-2020 ದಂದು ನಡೆಯುವ ವಿದಾನ ಮಂಡಲ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ವರದಿಯನ್ನು ಜಾರಿ ಮಾಡಿ ಒಳ ಮೀಸಲಾತಿ ಕಲ್ಪಿಸಿಕೊಡುವುದರ ಜೊತೆಗೆ ದಲಿತರ ಮೇಲೆ ನಿರಂತರ ದೌರ್ಜನ್ಯ ಮತ್ತು ಕೊಲೆ ಕೇಸುಗಳನ್ನು ಮುಚ್ಚಿಹಾಕುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿ ದಲಿತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಎಲೆಕೂಡ್ಲಿಗಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಸ್ಕಾರ ಹಾಕಿದವರಿಗೆ ಕಠಿಣ ಕಾನೂನು ಕ್ರಮ ತೆಗೆದುಕೊಂಡು ದಲಿತರ ಮೇಲೆ ಧಾಖಲಿಸಿರುವ ಸುಳ್ಳು ಕೊಲೆ ಪ್ರಯತ್ನ ಕೇಸನ್ನು ಹಿಂಪಡಿಯುವುದು ಕುರಿತಂತೆ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಪತ್ರವನ್ನು ಸಲ್ಲಿಸೀದರು.
ಈ ಸಂಧರ್ಭದಲ್ಲಿ ಸಂಸ್ಥಾಪಕ /ರಾಜ್ಯಾಧ್ಯಕ್ಷರಾದ ಚಂದ್ರಕಾಂತ ಎಸ್ ಕಾದ್ರೊಳ್ಳಿ…ಹನುಮಂತಪ್ಪ ಹಂಪನಾಳ
ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ
ರಾಜ್ಯ ಯುವ ಘಟಕ ಅಧ್ಯಕ್ಷರಾದ ಮಂಜುನಾಥ್ ದೊಡ್ಡಮನಿ.
ರಾಜ್ಯ ಸಮಿತಿಯ ಪದಾಧಿಕಾರಿಗಳು ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗು
ಉತ್ತರ ಕರ್ನಾಟಕ ಮತ್ತು ಹೈದ್ರಾಬಾದ್ ಕರ್ನಾಟಕದ ವಿವಿಧ ವಿಭಾಗಗಳ ವಿಭಾಗೀಯ ಅಧ್ಯಕ್ಷರುಗಳು 16 ಜಿಲ್ಲೆಗಳ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರುಗಳು ಸಂಘನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.