*ಬೆಳಗಾವಿ: ನಿಷೇಧಾಜ್ಞೆ ಜೂನ್ 7ರವರೆಗೆ ಮುಂದುವರಿಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ*

Share The News

ಬೆಳಗಾವಿ: ನಿಷೇಧಾಜ್ಞೆ ಜೂನ್ 7ರವರೆಗೆ ಮುಂದುವರಿಕೆ

ಬೆಳಗಾವಿ: ಕೊರೊನಾ ಹರಡುವಿಕೆ ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 12ರ ರಾತ್ರಿ 9 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಕೋವಿಡ್ ಪ್ರಕರಣಗಳಲ್ಲಿ ಪ್ರತಿ ದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Share The News

Leave a Reply

Your email address will not be published. Required fields are marked *

error: Content is protected !!