*ಬೆಂಗಳೂರಿಂದ ತುಂಬೆಲ್ಲಾ ನೀಲಿ ಜನಸಾಗರ ಸಾವಿರ ಸಾವಿರ ಸಂಖ್ಯೆಯಲ್ಲಿ ಜಮಾಯಿಸಿದ ಅಂಬೇಡ್ಕರ ಅನುಯಾಯಿಗಳು ನ್ಯಾಯಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ರಾಜಧಾನಿಗೆ ಜನರ ದೌಡು*

Share The News

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಪ್ರದರ್ಶಿಸಲಾಯಿತು.

ರಾಯಚೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.

ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಯಿತು. ನೂರಾರು ವಾಹನಗಳನ್ನು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯ ಜೈಭೀಮ್ ಘೋಷಣೆಗಳು ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು, ನೀಲಿ ಟೋಪಿಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತ ಮೆರವಣಿಗೆಯನ್ನು ಮುನ್ನಡೆಸಿದರು. ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

“ಕೋರ್ಟ್ ಸಭಾಂಗಣದಲ್ಲಿಯೇ ಅಂಬೇಡ್ಕರ್ ಭಾವಚಿತ್ರ ಇರುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯದಲ್ಲಿ ಮೀಸಲಾತಿ ಕಡ್ಡಾಯ ಮಾಡಬೇಕು. ಹುಮನಾಬಾದ್ ತಹಸೀಲ್ದಾರ್ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಲಾಯಿತು.

ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಅಂಬೇಡ್ಕರ್ ಹಾಗೂ ಸಂವಿಧಾನವನ್ನು ಅವಮಾನಿಸುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಮಲ್ಲಿಕಾರ್ಜುನಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.

ಸಿಎಂ ಸ್ಥಳಕ್ಕೆ ಭೇಟಿ: ಭರವಸೆ

ಸಮಾರಂಭ ಸ್ಥಳಕ್ಕೆ (ಫ್ರೀಡಂ ಪಾರ್ಕ್‌) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ, ಬೇಡಿಕೆಗಳನ್ನು ಸಂಗ್ರಹಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೋರಾಟಗಾರರ ಮನವಿ ಪತ್ರವನ್ನು ಸಿಎಂ ಸ್ವೀಕರಿಸಿದರು. ಜೊತೆಗೆ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ಖಂಡಿಸಿದರು.

ಅಂಬೇಡ್ಕರ್ ಫೋಟೋ ತೆರವು ಮಾಡಿ ಅವಮಾನ ಮಾಡಿದ ಘಟನೆಯು ನಮಗೂ ಕಣ್ಣು ತೆರೆಸಿದೆ. ಘಟನೆ ಸಂಬಂಧ ದಲಿತ ಸಮುದಾಯಗಳು ನನಗೆ ವಿವರಿಸಿದ್ದಾರೆ. ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು” ಎಂದು ಪ್ರಕಟಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಹೋರಾಟದ ಕಾರ್ಯಕ್ರಮ.

 


Share The News

Leave a Reply

Your email address will not be published. Required fields are marked *

error: Content is protected !!