*BENGALURU CITYಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್*

Share The News

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ.

 

ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ

ಅಷ್ಟೇ ಅಲ್ಲದೆ, ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354 ಎಂದು ಸಲಹೆ ನೀಡಿದ್ದಾರೆ


Share The News

Leave a Reply

Your email address will not be published. Required fields are marked *

error: Content is protected !!