*ಬ್ಲ್ಯಾಕ್ ಫಂಗಸ್ ಭಯಬೇಡ, ಎಚ್ಚರಿಕೆ ಇರಲಿ, ಸೋಂಕಿತರು ಕೋವಿಡ್ ಕೇರ್ ಗಳಿಗೆ ದಾಖಲಾಗಿ ರಾಜ್ಯದ ಜನತೆಗೆ ಡಿಸಿಎಂ ಮನವಿ*

Share The News

ಅಥಣಿ:- ಬ್ಲ್ಯಾಕ್ ಫಂಗಸ್ ನ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಸರ್ಕಾರದೊಂದಿಗೆ ಕೈ ಜೋಡಿಸಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕೆಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಅಥಣಿಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಸವದಿ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಅದರಂತೆ ಕೊರೋನಾ ಹಾಗೂ ಬ್ಲ್ಯಾಕ್ ಫಂಗಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸನ್ನದ್ಧವಾಗಿದೆ ಅಲ್ಲದೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯನ್ನು ಉಚಿತವಾಗಿ ರಾಜ್ಯ ಸರ್ಕಾರದ ವತಿಯಿಂದಲೇ ಮಾಡಲಾಗುವುದು ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಕೇವಲ ನಿಮ್ಮ ನಿಮ್ಮ ಎಚ್ಚರಿಕೆಯಲ್ಲಿ ಇರಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ 2 ಆಂಬುಲೆನ್ಸ್ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ ಅವರು ಎಲ್ಲಾ ರೀತಿಯ ಹೈಟೆಕ್ ತಂತ್ರಜ್ಞಾನ ಹೊಂದಿರುವ ಸರ್ವ ಸಜ್ಜಿತವಾಗಿರುವ ವಿಶೇಷ ಬಸ್ ಆಂಬುಲೆನ್ಸ್ ವ್ಯವಸ್ಥೆಯನ್ನು ಸುಮಾರು 29 ಲಕ್ಷ ವೆಚ್ಚದಲ್ಲಿ ಕ್ಷೇತ್ರದ ಜನರ ಸೇವೆಗಾಗಿ ನೀಡಲಾಗುವುದೆಂದು ಹೇಳಿದರು.
ಇದೇ ವೇಳೆ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಮಾಡಿ ಪತ್ರಕರ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯವಾಗಿದೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಾಧ್ಯಮಗಳು ಸರ್ಕಾರದೊಂದಿಗೆ ಕೈ ಜೋಡಿಸಿ ಜನಜಾಗೃತಿ ಮೂಡಿಸಬೇಕೆಂದು ಮನವಿ ಮಾಡಿಕೊಂಡರು. ನಾಳೆಯಿಂದ ತಾಲೂಕಿನ ಕಾಲುವೆಗಳಿಗೆ ಮಹಾರಾಷ್ಟ್ರದಿಂದ ಸುಮಾರು 3ಸಾವಿರ ಕ್ಯೂಸೆಕ್ಸ್ ನೀರು ಹರಿಸುವ ಮೂಲಕ ಎಲ್ಲ ಕೆರೆಗಳಿಗೆ ಹಾಗೂ ನೀರಿನ ಆಕರಗಳಿಗೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ ನೀಡಿದರು.
ಮುಖ್ಯವಾಗಿ ರಾಜ್ಯದ ಎಲ್ಲ ಜನಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಎರಡೆರಡು ಬಸ್ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಕೊಳ್ಳಲು ಮುಂದಾಗಬೇಕು ಎಂದು ಮನವಿ ಮಾಡಿದರು ಈ ಕೆಲಸಕ್ಕಾಗಿ ಕೆಎಸ್ಸಾರ್ಟಿಸಿ ನಿಗಮಕ್ಕೆ ತಲಾ 10ಲಕ್ಷ ಹಣ ನೀಡಿದರೆ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಬಸ್ ಆಂಬುಲೆನ್ಸ್ ನೀಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಅದರಂತೆ ಅಥಣಿ ತಾಲೂಕಿನಲಿಯೂ ಇದೇ ರೀತಿಯ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಇದರಿಂದ ತುರ್ತಾಗಿ ರೋಗಿಯ ಆರೈಕೆ ಆಗುತ್ತದೆ ಆಸ್ಪತ್ರೆಯಲ್ಲಿ ಬೆಡ್ ಸಿಗದಿರುವ ಕೋವಿಡ್ ಸೋಂಕಿತರಿಗೆ ಬೆಡ್ ದೊರೆಯುವವರೆಗೆ ಈ ಬಸ್ ಆಂಬುಲೆನ್ಸ್ ನಲ್ಲಿ ಚಿಕಿತ್ಸೆ ನೀಡಲು ಅನುಕೂಲ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ನೀಡಿ ಕೋವಿಡ್ ಸಮಯದಲ್ಲಿ ಜನರಿಗೆ ಜನಸ್ನೇಹಿಯಾಗಿರುವ ಲಕ್ಷ್ಮಣ ಸವದಿ ನಡೆಗೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.


Share The News

Leave a Reply

Your email address will not be published. Required fields are marked *

error: Content is protected !!