ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »ಚಿಕ್ಕಮಂಗಳೂರ
ಪುನೀತ್ ನಿಧನ ಸುದ್ದಿ ಕೇಳುತ್ತಿದಂತೆ ಸಾವನ್ನಪ್ಪಿದ ಅಭಿಮಾನಿ..!
ಹನೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ತಿಳಿದು ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ(30) ಮೃತರು. ಶುಕ್ರವಾರ ಬೆಳಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುನಿಯಪ್ಪ ಆಘಾತಗೊಂಡಿದ್ದರು ಅಪ್ಪು ಆರೋಗ್ಯ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಮುನಿಯಪ್ಪ ಕಣ್ಣೀರು ಹಾಕುತ್ತಾ ಕುಸಿದರು. ಅತ್ತ ಅಪ್ಪು ಇನ್ನಿಲ್ಲ ಎಂಬ ಸುದ್ದಿ ಬರುತ್ತಿದ್ದಂತೆ ಮುನಿಯಪ್ಪಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಪ್ರಾಣಪಕ್ಷಿ ಹಾರಿಹೋಗಿದೆ. 7 ವರ್ಷಗಳಿಂದ …
Read More »*ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿ ಎಸ್ ಐ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ*
ಚಿಕ್ಕಮಂಗಳೂರು : ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ.ಎಚ್.ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನನ್ನು ಪ್ರಕರಣವೊಂದರಲ್ಲಿ ಠಾಣೆಗೆ ಕರೆಸಿಕೊಂಡ ಗೋಣಿಬೀಡು ಠಾಣಾಧಿಕಾರಿ ಅರ್ಜುನ್, ಯುವಕನಿಗೆ ಹಲ್ಲೆ ಮಾಡಿದ್ದಲ್ಲದೇ ಠಾಣೆಯಲ್ಲಿದ್ದ ಆರೋಪಿಯೊಬ್ಬನ ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಿದ್ದಾರೆಂದು ಯುವಕ ದೂರು ನೀಡಿದ್ದ. …
Read More »