ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್- ಹೀಗೆ ಹಲವು …
Read More »