ಬೆಳಗಾವಿ :ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದ ಬಿ.ಆರ್.ಸಂಗಪ್ಪಗೋಳ (76) ಅವರು ನಿಧನಹೊಂದಿದ್ದಾರೆ.
ಅನಾರೋಗ್ಯದಿಂದ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಕೆಎಲ್‍ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾಯಂಕಾಲ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದವರಾಗಿದ್ದ ಸಂಗಪ್ಪಗೋಳ ಅವರು ಚಿಕ್ಕೋಡಿಯಲ್ಲಿಯೇ ನೆಲೆಸಿದ್ದರು. ಕಳೆದ ಹಲವಾರು ವರ್ಷಗಳಿಂದ ಚಿಕ್ಕೋಡಿ ಜಿಲ್ಲಾ ರಚನೆಗೆ ಸಾಕಷ್ಟು ಹೋರಾಟ ಮಾಡಿಕೊಂಡು ಬಂದಿದ್ದರು. ಸಧ್ಯ ಇವರ ನಿಧನದ ಸುದ್ದಿ ಕೇಳಿ ಚಿಕ್ಕೋಡಿ ಜನತೆಯು ದುಖದ ಮಡುವಿನಲ್ಲಿ ತೇಲಾಡುವಂತಾಗಿದೆ.