ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಆದ್ರೇ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಖಡಕ್ ಆದೇಶದಲ್ಲಿ ತಿಳಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರು ಸರ್ಕಾದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ದಿನಾಂಕ 03-11-2020ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದರಿಂದ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ ಆದ್ದರಿಂದ, ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನ ನಿಗಮ ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಸೂಚಿಸಲುವಂತೆ ತಿಳಿಸಿದೆ. ಮುಂದುವರೆದು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸದಿರುವವರನ್ನು ಪತ್ತೆ ಹಚ್ಚಿ, ಬಿಗಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.