ಬೆಳಗಾವಿ;ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ರಾಜಕೀಯ ಮುಖಂಡ ಸಚೀನ ಸಾವಂತ್ ಹೇಳಿಕೆಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆ ಖಂಡಿಸಿದೆ. ಕನ್ನಡಿಗರ ವೀರರು ಮಹಾರಾಷ್ಟ್ರದ ಬಹುಪಾಲನ್ನು ಆಳಿದ್ದಾರೆ.ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಆಳಿದ ನೆಲೆಯಿದು, ಬೆಳಗಾವಿ ಅಷ್ಟೇ ಅಲ್ಲ, ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ರಾಜಕೀಯ ಮುಖಂಡರು. ಒಂದು ಬಾರಿ ಇತಿಹಾಸವನ್ನು ಅವಲೋಕಿಸಿ, ಹಗಲುಗನಸು ಕಾಣುವುದನ್ನು ಬಿಡಬೇಕು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾಜನ್ ವರದಿಯಲ್ಲೇ ಸ್ಪಷ್ಟವಾಗಿ ಹೇಳಲಾಗಿದೆ. ಇದಾಗಿಯೂ ಮಹಾರಾಷ್ಟ್ರ ತನ್ನ ಕಿತಾಪತಿ ನಿಲ್ಲಿಸಿಲ್ಲ. ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಇರುವಾಗ ತಮಗೆ ಬೇಕಾದ ದಾಖಲೆಗಳನ್ನು ಸೃಷ್ಠಿ ಮಾಡಿಕೊಳ್ಳಲು ಮಾಡುತ್ತಿರುವ ಹುನ್ನಾರ ಇರಬಹುದು. ಪದೆ ಪದೆ ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ ಠಾಕ್ರೆ ಅಲ್ಲಿನ ರಾಜಕೀಯ ಮುಖಂಡರು ಈ ಥರ ಹೇಳಿಕೆ ನೀಡಿರುವುದರ ಹಿಂದೆ ಏನೋ ಒಂದು ಪಿತೂರಿ ಇದೆ. ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಆಗ್ರಹಿಸಿದೆ. ಅಲ್ಲದೇ ಕರ್ನಾಟಕದ ಒಂದಿಂಚು ನೆಲ ಬಿಟ್ಟುಕೊಡುವುದಿಲ್ಲ ಎಂದು ಕಡ್ಡಿ ಮುರಿಯುವಂತೆ ಮಹಾರಾಷ್ಟ್ರಕ್ಕೆ . ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರು
ಸಂದೇಶ ನೀಡಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಠಿಣ ಸಂದೇಶ ರವಾನಿಸಬೇಕು ಬೆಳಗಾವಿ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎನ್ನುವ ಎಚ್ಚರಿಕೆ ನೀಡಬೇಕು.
ಎಂದು ಕರ್ನಾಟಕ ವಿಶ್ವನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಅಯೂಬ ಪೀರಜಾದೆ ಆಗ್ರಹಿಸಿದ್ದಾರೆ