*ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು*

Share The News

ಘಟಪ್ರಭಾ: ಇಲ್ಲಿನ ಡಾ.ಎನ್.ಎಸ್. ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಂಗಳವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡಲಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಸ್ವಾತಂತ್ರ್ಯ ಹಾಗೂ ಸಮಾನತೆಯ ಹಕ್ಕು ಲಭಿಸಲು ಸಂವಿಧಾನ ಕಾರಣವಾಗಿದೆ. ಸಂವಿಧಾನವನ್ನು ದೇಶದ ಎಲ್ಲ ನಾಗರಿಕರೂ ಅರ್ಥೈಸಿಕೊಳ್ಳಬೇಕಿದೆ ಎಂದು ಹೇಳಿದರು.

ಇಂದಿನ ಯುವಕರಿಗೆ ಸ್ವಾತಂತ್ರ್ಯ ಹಾಗೂ ಸಂವಿಧಾನದ ಮಹತ್ವವನ್ನು ತಿಳಿಹೇಳುವ ಅಗತ್ಯವಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಣೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಜಗತ್ತಿನಲ್ಲೇ ಅತಿಹೆಚ್ಚು ಯುವಕರನ್ನು ಹೊಂದಿರುವ ದೇಶ ನಮ್ಮದಾಗಿದ್ದು, ಯುವ ಸಂಪತ್ತನ್ನು ಸೂಕ್ತವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಯುವಕರಿಗೆ ಸಮಾಜದ ಸರಿ-ತಪ್ಪುಗಳನ್ನು ತಿಳಿಸಿ, ಸರಿಯಾದ ದಾರಿಯಲ್ಲಿ ಕರೆದುಕೊಂಡು ಹೋಗುವುದು ಇಂದಿನ ದಿನಮಾನಗಳಲ್ಲಿಅವಶ್ಯವಾಗಿದೆ ಎಂದು ಹೇಳಿದರು.

ಎಐಸಿಸಿ ಗೋವಾ ವೀಕ್ಷಕ ಸುನೀಲ್ ಹನುಮಣ್ಣವರ್, ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್, ಸತೀಶ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ, ಆನಂದಸ್ವಾಮಿ ಘಟ್ಟದವರಮಠ, ಮಹಾವೀರ ಮುನ್ನೋಳಿ, ಬಾಲಾಜಿ ಸಾವಳಗಿ, ಪ್ರಕಾಶ ಡಾಂಗೆ, ಕಲ್ಪನಾ ದೋಸಿ, ಮಂಜುಳಾ ರಾಮನಗಟ್ಟಿ, ಡಾ.ಜಿ.ಎಂ. ವೈದ್ಯ, ಪಾಂಡು ಮಣ್ಣಿಕೇರಿ, ಭರಮಣ್ಣ ಕೋಳಿ, ವಿಜಯ ನಗರ, ಯಲ್ಲಪ್ಪ ಶಿಂಗೆ ಇನ್ನಿತರರು ಇದ್ದರು.


Share The News

Leave a Reply

Your email address will not be published. Required fields are marked *

error: Content is protected !!